Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:21 - ಕನ್ನಡ ಸಮಕಾಲಿಕ ಅನುವಾದ

21 ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ; ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೆಲವನು ಕೆರೆಯುತ್ತಾ, ತನ್ನ ಶಕ್ತಿಗಾಗಿ ಹಿಗ್ಗುತ್ತಾ ಸನ್ನದ್ಧ ಸೈನ್ಯವನು ಇದಿರಿಸುತ್ತಾ ನುಗ್ಗುತ್ತದೆ ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ ಸನ್ನಾಹದ ಸೈನ್ಯವನ್ನು ಎದುರಿಸಲು ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ, ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:21
8 ತಿಳಿವುಗಳ ಹೋಲಿಕೆ  

ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.


ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.


ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ,


ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.


ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು