Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:26 - ಕನ್ನಡ ಸಮಕಾಲಿಕ ಅನುವಾದ

26 “ಯೋಬನೇ, ಗಿಡುಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದ ಕಡೆಗೆ ಹಾರುವುದು ನಿನ್ನ ಜ್ಞಾನದಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗಿಡುಗವು ರೆಕ್ಕೆ ಹರಡುವುದನು ದಕ್ಷಿಣದಿಕ್ಕಿಗೆ ಹಾರಿ ವಲಸೆಹೋಗುವುದನು ನಿನ್ನಿಂದ ಕಲಿತದೆಂತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗಿಡಗವು ತನ್ನ ರೆಕ್ಕೆಗಳನ್ನು ಹರಡಿ ತೆಂಕಣ ದಿಕ್ಕಿಗೆ ಹಾರುವದು ನಿನ್ನ ವಿವೇಕದಿಂದಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:26
6 ತಿಳಿವುಗಳ ಹೋಲಿಕೆ  

ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.


ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತಿವೆ. ಪಕ್ಷಿಗಳು ಹಾಡುವ ಕಾಲ ಬಂತು. ಪಾರಿವಾಳಗಳ ಸ್ವರ ನಮ್ಮ ಊರಲ್ಲಿ ಕೇಳಿಸುತ್ತಿದೆ.


ಉಷ್ಟ್ರಪಕ್ಷಿ, ಉಲೂಕ, ಚೀರು ಗೂಬೆ, ಕಡಲ ಹಕ್ಕಿ, ಸಕಲವಿಧವಾದ ಡೇಗೆ,


“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.


ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ.


ರಣಹದ್ದು ಎತ್ತರಕ್ಕೆ ಹಾರುವುದೂ, ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು