Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:5 - ಕನ್ನಡ ಸಮಕಾಲಿಕ ಅನುವಾದ

5 “ಕಾಡುಕತ್ತೆಗೆ ಸ್ವತಂತ್ರವನ್ನು ಕೊಟ್ಟವರು ಯಾರು? ಕಾಡುಕತ್ತೆಯ ಕಟ್ಟನ್ನು ಬಿಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಾಡುಕತ್ತೆಗೆ ಸ್ವಾತಂತ್ರ್ಯವನು ಕೊಟ್ಟವರಾರು? ಅದರ ಕಟ್ಟನು ಬಿಚ್ಚಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:5
13 ತಿಳಿವುಗಳ ಹೋಲಿಕೆ  

ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.


ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.


ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ? ಮೇವು ಇದ್ದರೆ ಎತ್ತು ಕೂಗುವುದೋ?


ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.


ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”


ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


“ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.


ಅವನು ಕಾಡುಕತ್ತೆಯಂತೆ ಇರುವನು. ಪ್ರತಿಯೊಬ್ಬರಿಗೂ ವಿರೋಧವಾಗಿ ಅವನು ಕೈ ಎತ್ತುವನು, ಪ್ರತಿಯೊಬ್ಬರ ಕೈಯೂ ಅವನ ವಿರೋಧವಾಗಿ ಇರುವುದು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು.”


ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ; ಅವು ತಾಯಿಯನ್ನು ಅಗಲಿದ ಬಳಿಕ ತಿರುಗಿ ಬರುವುದಿಲ್ಲ.


ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು