ಯೋಬ 4:19 - ಕನ್ನಡ ಸಮಕಾಲಿಕ ಅನುವಾದ19 ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು! ಅಧ್ಯಾಯವನ್ನು ನೋಡಿ |