Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:21 - ಕನ್ನಡ ಸಮಕಾಲಿಕ ಅನುವಾದ

21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರ ಗುಡಾರದ ಹಗ್ಗವು ಬಿಚ್ಚಿ ಹೋಗುವದಷ್ಟೆ, ಜ್ಞಾನವಿಲ್ಲದವರಾಗಿ ಸಾಯುವರು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರ ಗುಡಾರಗಳ ಹಗ್ಗಗಳು ಬಿಚ್ಚಲ್ಪಡುವವು, ಅವರು ಜ್ಞಾನವಿಲ್ಲದವರಾಗಿ ಸತ್ತುಹೋಗುವರು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:21
15 ತಿಳಿವುಗಳ ಹೋಲಿಕೆ  

ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.


ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”


ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.


ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ,


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.”


ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.


ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಬಲ್ಲವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು