Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:5 - ಕನ್ನಡ ಸಮಕಾಲಿಕ ಅನುವಾದ

5 ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈಗಲಾದರೋ ನಿನಗೇ [ಶ್ರಮೆ] ಬಂತು. ಅದರಿಂದ ನೀನು ಬೇಸರಗೊಂಡಿರುವಿ, ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:5
12 ತಿಳಿವುಗಳ ಹೋಲಿಕೆ  

“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.


ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.


ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ.


“ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.


ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.


ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು