ಯೋಬ 42:2 - ಕನ್ನಡ ಸಮಕಾಲಿಕ ಅನುವಾದ2 “ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ, ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ತಾವು ಎಲ್ಲಾ ಕಾರ್ಯಗಳನು ನಡೆಸಲು ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಸಕಲಕಾರ್ಯಗಳನ್ನು ನಡಿಸಬಲ್ಲಿಯೆಂತಲೂ ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಯೆಹೋವನೇ, ನೀನು ಪ್ರತಿಯೊಂದನ್ನೂ ಮಾಡಬಲ್ಲೆ ಎಂದು ನನಗೆ ಗೊತ್ತಿದೆ. ನೀನು ಮಾಡಿದ ಆಲೋಚನೆಗಳನ್ನು ಯಾವುದೂ ಬದಲಿಸಲಾರದು; ಯಾವುದೂ ನಿಲ್ಲಿಸಲಾರದು. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.