Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 42:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು - ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀವು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಯೋಬನೊಂದಿಗೆ ಮಾತಾಡಿದ ಮೇಲೆ, ಎಲೀಫಜನೊಂದಿಗೆ ಮಾತಾಡಿದನು. ಎಲೀಫಜನು ತೇಮಾನ್ ಪಟ್ಟಣದವನಾಗಿದ್ದನು. ಯೆಹೋವನು ಎಲೀಫಜನಿಗೆ, “ನಾನು ನಿನ್ನ ಮೇಲೆಯೂ ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ. ಯಾಕೆಂದರೆ ನೀನು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ. ಆದರೆ ಯೋಬನು ನನ್ನ ಬಗ್ಗೆ ಹೇಳಿದವುಗಳು ಸತ್ಯವಾಗಿವೆ. ಯೋಬನು ನನ್ನ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 42:7
13 ತಿಳಿವುಗಳ ಹೋಲಿಕೆ  

ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:


ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.


ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:


ಆಗ ನಾಮಾಥ್ಯನಾದ ಚೋಫರನು ಹೀಗೆಂದನು:


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.


ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.”


ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ,


ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು