Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:10 - ಕನ್ನಡ ಸಮಕಾಲಿಕ ಅನುವಾದ

10 ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಭೂವಿುಯ ಮೇಲೆ ಮಳೆಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಭೂಮಿಯ ಮೇಲೆ ಮಳೆ ಸುರಿಸಿ ಹೊಲಗದ್ದೆಗಳಿಗೆ ನೀರನ್ನು ಒದಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:10
13 ತಿಳಿವುಗಳ ಹೋಲಿಕೆ  

ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.


ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.


ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ.


ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ


“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.


ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ.


ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು