Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:20 - ಕನ್ನಡ ಸಮಕಾಲಿಕ ಅನುವಾದ

20 ಅವರು ನಿರೀಕ್ಷಿಸಿದ್ದರಿಂದ ವ್ಯಥೆಗೊಂಡರು; ಅವರು ಬಂದು ಸ್ಥಳಸೇರಿದರೂ ನಿರಾಶರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಶಿಸಿದಷ್ಟೂ ಆಶಾಭಂಗಪಡುತ್ತಾರೆ ಆ ಪ್ರಯಾಣಿಕರು ನಂಬಿದಷ್ಟೂ ನಿರೀಕ್ಷೆಗೆಡುತ್ತಾರೆ ಆ ವರ್ತಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಲ್ಲಿಗೆ ಸೇರಿ ಆಶಾಭಂಗಪಟ್ಟರು, ನಂಬಿದಷ್ಟೂ ನಿರೀಕ್ಷೆಗೆಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀರು ಸಿಗುವುದೆಂದು ಅವರು ನಂಬಿಕೊಂಡಿದ್ದರೂ ಅವರಿಗೆ ನಿರಾಶೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:20
8 ತಿಳಿವುಗಳ ಹೋಲಿಕೆ  

ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.


ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ.


“ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ.


ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು