Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:7 - ಕನ್ನಡ ಸಮಕಾಲಿಕ ಅನುವಾದ

7 ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ, ಅಂಥ ಆಹಾರವು ನನಗೆ ಬೇಸರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಂಥಾ ಊಟವು ನನಗೆ ಅಸಹ್ಯ; ನಾನು ಅದನ್ನು ಮುಟ್ಟಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:7
11 ತಿಳಿವುಗಳ ಹೋಲಿಕೆ  

ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.


ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.


ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.


‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.


ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.


ರುಚಿ ಇಲ್ಲದ ಆಹಾರನ್ನು ಉಪ್ಪಿಲ್ಲದೆ ತಿನ್ನಬಹುದೋ? ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿಯುಂಟೋ?


“ದೇವರು ನನ್ನ ವಿಜ್ಞಾಪನೆಯನ್ನು ಲಾಲಿಸಿದರೆ ಸಾಕು, ನಾನು ನಿರೀಕ್ಷಿಸಿದ್ದನ್ನು ದೇವರು ಕೊಟ್ಟರೆ ಲೇಸು.


ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು