ಯೋಬ 7:2 - ಕನ್ನಡ ಸಮಕಾಲಿಕ ಅನುವಾದ2 ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ಸಂಜೆಯನ್ನು ಬಯಸುವ ದಾಸನಂತೆಯೂ, ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ಸಂಜೆಯನ್ನು ಬಯಸುವ ದಾಸನಂತೆಯೂ ಕೂಲಿಯನ್ನು ನಿರೀಕ್ಷಿಸುವ ಆಳಿನಂತೆಯೂ ಇದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.