Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:21 - ಕನ್ನಡ ಸಮಕಾಲಿಕ ಅನುವಾದ

21 ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತುಂಬಿಸುವನಾತ ನಿನ್ನ ಬಾಯನು ನಗೆಯಿಂದ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:21
13 ತಿಳಿವುಗಳ ಹೋಲಿಕೆ  

ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.


ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.


ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.


ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.


ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.


ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ.


ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ?


ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು