Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:8 - ಕನ್ನಡ ಸಮಕಾಲಿಕ ಅನುವಾದ

8 “ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಿಚಾರಿಸಿ ನೋಡು ಪುರಾತನ ಕಾಲವನು ಧ್ಯಾನಿಸಿ ನೋಡು ಪೂರ್ವಜರ ಅನುಭವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಯಮಾಡಿ ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಂಡುಕೊಂಡದ್ದಕ್ಕೂ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತುಕೊಂಡದ್ದನ್ನು ತಿಳಿದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:8
15 ತಿಳಿವುಗಳ ಹೋಲಿಕೆ  

ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ ಮರೆಮಾಡದೆ ನಮಗೆ ಪ್ರಕಟಿಸಿದರು.


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ತಲೆ ನರೆತವರೂ, ಹೆಚ್ಚು ಮುದುಕರಾದವರೂ, ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ.


ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ?


ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.


“ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ.


ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?


“ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು