Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:13 - ಕನ್ನಡ ಸಮಕಾಲಿಕ ಅನುವಾದ

13 ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವದಿಲ್ಲ; ಘಟಸರ್ಪದ ಸಹಾಯಕರು ಆತನಿಗೆ ಪಾದಾಕ್ರಾಂತರಾದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ತನ್ನ ಕೋಪವನ್ನು ತಡೆಹಿಡಿದುಕೊಳ್ಳುವುದಿಲ್ಲ. ರಹಬನ ಸಹಾಯಕರು ಸಹ ದೇವರ ಮುಂದೆ ಭಯದಿಂದ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:13
9 ತಿಳಿವುಗಳ ಹೋಲಿಕೆ  

ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.


ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು