Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:21 - ಕನ್ನಡ ಸಮಕಾಲಿಕ ಅನುವಾದ

21 “ನಾನು ನಿರ್ದೋಷಿಯೇ ಹೌದು, ನನ್ನ ಬಗ್ಗೆ ನನಗೆ ಚಿಂತೆ ಇಲ್ಲ; ನನ್ನ ಬಾಳನ್ನೇ ತಿರಸ್ಕಾರ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತೃಣೀಕರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:21
14 ತಿಳಿವುಗಳ ಹೋಲಿಕೆ  

ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,


ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.


ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಕರುಣೆಗೋಸ್ಕರ ಮೊರೆಯಿಡುವೆನು.


ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?


“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;


ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.


‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು