Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:23 - ಕನ್ನಡ ಸಮಕಾಲಿಕ ಅನುವಾದ

23 ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅಕಸ್ಮಾತ್ತಾಗಿ ಮಹಾವಿನಾಶ ಬಂದೊದಗಿದರೂ ನಿರ್ದೋಷಿಗಳ ಅವಸ್ಥೆ ಕಂಡು ಹಾಸ್ಯಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ವಿಪತ್ತು ಅಕಸ್ಮಾತ್ತಾಗಿ ಜನರನ್ನು ಸಂಹರಿಸಲು ನಿರ್ಮಲಚಿತ್ತರು ಮನಗುಂದುವದನ್ನು ಆತನು ನೋಡಿ ಹಾಸ್ಯಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:23
12 ತಿಳಿವುಗಳ ಹೋಲಿಕೆ  

“ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.


ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.


“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.


“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?


ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.


“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”


“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.


ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು