Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:31 - ಕನ್ನಡ ಸಮಕಾಲಿಕ ಅನುವಾದ

31 ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮುಳುಗಿಸಿಬಿಡುವೆ ನನ್ನನ್ನು ತಿಪ್ಪೆಗುಂಡಿಯಲ್ಲಿ ನನ್ನ ಉಡಿಗೆ ತೊಡಿಗೆಗಳೂ ಅಸಹ್ಯಪಡುವುವು ನನ್ನನು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ನನ್ನನ್ನು ಗುಂಡಿಯಲ್ಲಿ ಮುಣುಗಿಸಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯನಾಗುವಂತೆ ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:31
11 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.


ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.


ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.


ನಾನು ಹಿಮದ ನೀರಿನಲ್ಲಿ ಸ್ನಾನಮಾಡಿ, ಸಾಬೂನಿನಿಂದ ನನ್ನ ಕೈಗಳನ್ನು ತೊಳೆದುಕೊಂಡರೂ,


“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?


ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು? ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’


ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ, ನಿನ್ನನ್ನು ನೀಚಳನ್ನಾಗಿ ಮಾಡಿ, ನಿನ್ನನ್ನು ಪರಿಹಾಸ್ಯಕ್ಕೀಡುಮಾಡುವೆನು.


ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ.


ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು