Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:32 - ಕನ್ನಡ ಸಮಕಾಲಿಕ ಅನುವಾದ

32 “ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದೇವರು ನನ್ನಂಥ ಮನುಷ್ಯನಲ್ಲ; ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:32
17 ತಿಳಿವುಗಳ ಹೋಲಿಕೆ  

ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.


ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.


ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.


“ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?


ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು.


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು