Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:34 - ಕನ್ನಡ ಸಮಕಾಲಿಕ ಅನುವಾದ

34 ದೇವರ ಶಿಕ್ಷೆಯಕೋಲನ್ನು ನನ್ನ ಮೇಲಿನಿಂದ ತೊಲಗಿಸುವ ಒಬ್ಬ ಮಧ್ಯಸ್ಥ ಇದ್ದಿದ್ದರೆ, ದೇವರ ಭೀತಿಗೆ ನಾನು ಎಂದಿಗೂ ಹೆದರದೆ ಇರುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನನ್ನ ಮೇಲೆತ್ತಿರುವ ಕೋಲನ್ನು ಬಿಸಾಡಲಿ ಆತನ ಭಯಭೀತಿ ನನ್ನನು ಹೆದರಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ. ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ಥಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:34
11 ತಿಳಿವುಗಳ ಹೋಲಿಕೆ  

ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.


ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು.


ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ? ದೈವಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?


ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು? ನಿಮ್ಮ ಮೇಲಿನ ಭಯಭಕ್ತಿಗೆ ಕಾರಣವಾಗಿರುವ ನಿಮ್ಮ ಖಂಡನೆಯನ್ನು ಗ್ರಹಿಸುವವರ‍್ಯಾರು?


“ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ, ಅದರ ಸ್ಥಳದಿಂದ ಜಿಗಿಯುವಂತಾಗುತ್ತದೆ.


ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.


ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ.


ಕೋಲಿನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು