Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:12 - ಕನ್ನಡ ಸಮಕಾಲಿಕ ಅನುವಾದ

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದ್ರಾಕ್ಷಾಲತೆಯು ಆಶಾಭಂಗಪಟ್ಟಿದೆ; ಅಂಜೂರದ ಗಿಡವು ಕ್ಷೀಣವಾಗಿದೆ; ದಾಳಿಂಬ, ಖರ್ಜೂರ, ಸೇಬು, ಅಂತು ಸಕಲ ವನವೃಕ್ಷಗಳು ಒಣಗಿವೆ, ಆನಂದವು ತಗ್ಗಿ ನರಜನ್ಮದವರಿಗೆ ತಪ್ಪಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದ್ರಾಕ್ಷಿಬಳ್ಳಿಗಳು ಒಣಗಿಹೋಗಿವೆ ಮತ್ತು ಅಂಜೂರದ ಮರವು ಸಾಯುತ್ತಲಿದೆ. ದಾಳಿಂಬದ ಮರ, ಖರ್ಜೂರದ ಮರ, ಸೇಬಿನ ಮರ, ತೋಟದಲ್ಲಿರುವ ಎಲ್ಲಾ ಮರಗಳು ಒಣಗಿಹೋಗಿವೆ. ಜನರಲ್ಲಿರುವ ಸಂತೋಷವೂ ಬತ್ತಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:12
19 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.


ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.


ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?


ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.


ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.


ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.


ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.


ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶವು, ಹೊರಡುವುದು.


ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.


ನಿನ್ನ ತೋಟದಲ್ಲಿ ದಾಳಿಂಬೆ ವನವೂ ಫಲಕೊಡುವ ಉತ್ತಮ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಇವೆ.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.


ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು.


ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.


ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು