Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:3 - ಕನ್ನಡ ಸಮಕಾಲಿಕ ಅನುವಾದ

3 ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ, ಅವರ ಮಕ್ಕಳೂ ಮತ್ತೊಂದು ತಲಾಂತರಕ್ಕೂ ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ; ಅವರು ತಮ್ಮ ಮಕ್ಕಳಿಗೆ ತಿಳಿಸಲಿ; ಅವರ ಮಕ್ಕಳು ಮುಂದಿನ ತಲೆಮಾರಿಗೆ ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದನ್ನು ನಿಮ್ಮ ಮಕ್ಕಳಿಗೆ ವರ್ಣಿಸಿರಿ, ಅವರು ತಮ್ಮ ಮಕ್ಕಳಿಗೆ ವಿವರಿಸಲಿ, ಅವರು ಮುಂದಿನ ತಲೆಯವರಿಗೆ ತಿಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇವುಗಳನ್ನು ನೀವು ನಿಮ್ಮ ಮಕ್ಕಳಿಗೆ ತಿಳಿಸುವಿರಿ. ಮತ್ತು ನಿಮ್ಮ ಮಕ್ಕಳು ಅವರ ಮಕ್ಕಳಿಗೆ ತಿಳಿಸುವರು. ಮತ್ತು ನಿಮ್ಮ ಮೊಮ್ಮಕ್ಕಳು ಅವರ ನಂತರದ ಪೀಳಿಗೆಗೆ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:3
10 ತಿಳಿವುಗಳ ಹೋಲಿಕೆ  

ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.


ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ.


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು