Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:6 - ಕನ್ನಡ ಸಮಕಾಲಿಕ ಅನುವಾದ

6 ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶತ್ರುರಾಷ್ಟ್ರ ನನ್ನ ನಾಡನ್ನು ಆಕ್ರಮಿಸಿದೆ. ಆ ರಾಷ್ಟ್ರ ಪ್ರಬಲವಾದುದು; ಅದರ ಸೈನ್ಯ ಅಸಂಖ್ಯಾತವಾದುದು; ಅದರ ಹಲ್ಲುಗಳು ಸಿಂಹದ ಹಲ್ಲುಗಳು; ಅದರ ಕೋರೆಗಳು ಮೃಗರಾಜನ ಕೋರೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಗೋ, ನನ್ನ ದೇಶದ ಮೇಲೆ ಅಸಂಖ್ಯಾತ ಪ್ರಬಲಸೈನ್ಯವು ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ, ಅದರ ಕೋರೆಗಳು ಮೃಗರಾಜನ ಕೋರೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನನ್ನ ಜನಾಂಗಕ್ಕೆ ವಿರುದ್ಧವಾಗಿ ಬಲಶಾಲಿಯಾದ ದೊಡ್ಡ ರಾಜ್ಯವು ಯುದ್ಧಕ್ಕೆ ಬರುವದು. ಅವರು ಸೈನಿಕರನ್ನು ಲೆಕ್ಕಿಸಲು ಸಾಧ್ಯವಿಲ್ಲ. ಆ ಮಿಡತೆಗಳಂತಿರುವ ಸೈನಿಕರು ನಿಮ್ಮನ್ನು ಸೀಳಿಬಿಡುವರು. ಅವರ ಹಲ್ಲುಗಳು ಸಿಂಹದ ಹಲ್ಲಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:6
9 ತಿಳಿವುಗಳ ಹೋಲಿಕೆ  

“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು