ಯೋಯೇಲ 2:14 - ಕನ್ನಡ ಸಮಕಾಲಿಕ ಅನುವಾದ14 ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ. ಅಧ್ಯಾಯವನ್ನು ನೋಡಿ |