Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:15 - ಕನ್ನಡ ಸಮಕಾಲಿಕ ಅನುವಾದ

15 ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಚೀಯೋನಿನಲ್ಲಿ ಕೊಂಬೂದಿರಿ, ಉಪವಾಸದಿನವನ್ನು ಗೊತ್ತುಮಾಡಿರಿ, ಸಂಘವನ್ನು ನೆರೆಯಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಚೀಯೋನಿನಲ್ಲಿ ತುತ್ತೂರಿ ಊದಿರಿ. ವಿಶೇಷ ಕೂಟಕ್ಕಾಗಿ ಜನರನ್ನು ಕೂಡಿಸಿರಿ. ಉಪವಾಸದ ದಿನ ಗೊತ್ತುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:15
8 ತಿಳಿವುಗಳ ಹೋಲಿಕೆ  

ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು.


ಅವುಗಳನ್ನು ಊದುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.


ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.


ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,


ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು