ಯೋಯೇಲ 2:19 - ಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರ ಬಿನ್ನಹವನ್ನು ಲಾಲಿಸಿ ಅವರಿಗೆ ಹೀಗೆ ಹೇಳಿದನು - ಇಗೋ, ನಾನು ಧಾನ್ಯದ್ರಾಕ್ಷಾರಸತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ; ಅವುಗಳಿಂದ ನಿಮಗೆ ತೃಪ್ತಿಯಾಗುವದು; ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ. ಅಧ್ಯಾಯವನ್ನು ನೋಡಿ |