Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:2 - ಕನ್ನಡ ಸಮಕಾಲಿಕ ಅನುವಾದ

2 ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:2
34 ತಿಳಿವುಗಳ ಹೋಲಿಕೆ  

ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.


ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.


ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.


ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.


ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”


ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.


ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.


ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು.


ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.


ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.


ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.


ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.


ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.


ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು