Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:20 - ಕನ್ನಡ ಸಮಕಾಲಿಕ ಅನುವಾದ

20 “ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಬಡಗಣ ದಂಡನ್ನು ನಿಮ್ಮ ಕಡೆಯಿಂದ ದೂರ ತೊಲಗಿಸಿ ಹಾಳು ಬೆಗ್ಗಾಡಿಗೆ ಓಡಿಸಿ ಅದರ ಮುಂಭಾಗವನ್ನು ಮೂಡಣ ಸಮುದ್ರಕ್ಕೂ ಹಿಂಭಾಗವನ್ನು ಪಡುವಣ ಸಮುದ್ರಕ್ಕೂ ತಳ್ಳಿಬಿಡುವೆನು; ಆಹಾ, ಮಹತ್ಕಾರ್ಯಗಳನ್ನು ಮಾಡಿತು, ಅದರ [ಹೆಣಗಳ] ದುರ್ವಾಸನೆಯು ಏರುವದು, ಗಬ್ಬು ನಾರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:20
15 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರಲ್ಲಿ ಹತರಾದವರು, ಬೀದಿಪಾಲಾಗುವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತ ಪ್ರವಾಹದಿಂದ ಪರ್ವತಗಳು ತೋಯಿಸುವುದು.


ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.


ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.


ಯೆಹೋವ ದೇವರು ಬಲವಾದ ಪಶ್ಚಿಮ ಗಾಳಿಯನ್ನು ಬೀಸುವಂತೆ ಮಾಡಿದರು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪು ಸಮುದ್ರದಲ್ಲಿ ಹಾಕಿತು. ಈಜಿಪ್ಟ್ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯಲಿಲ್ಲ.


ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.


ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.


ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ.


“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು