Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:21 - ಕನ್ನಡ ಸಮಕಾಲಿಕ ಅನುವಾದ

21 ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಭೂನಿವಾಸಿಗಳೇ, ಭಯಪಡಬೇಡಿರಿ; ಹರ್ಷಿಸಿ ಆನಂದಿಸಿರಿ. ಸರ್ವೇಶ್ವರ ಮಹತ್ಕಾರ್ಯಗಳನ್ನು ಎಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ ಸಂತೋಷದಿಂದ ಆನಂದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:21
21 ತಿಳಿವುಗಳ ಹೋಲಿಕೆ  

“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.


“ಈಗ ನಿಂತುಕೊಂಡು ಯೆಹೋವ ದೇವರು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ಮಹತ್ಕಾರ್ಯವನ್ನು ನೋಡಿರಿ.


“ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ.


“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?


ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.


ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?


ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು