Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:22 - ಕನ್ನಡ ಸಮಕಾಲಿಕ ಅನುವಾದ

22 ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಭೂಜಂತುಗಳೇ, ಅಂಜಬೇಡಿರಿ; ಕಾಡಿನ ಕಾವಲಲ್ಲಿ ಹುಲ್ಲು ಮೊಳೆಯುವದು, ಮರವು ಹಣ್ಣುಬಿಡುವದು, ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ಬಹಳ ಹಣ್ಣುಗಳನ್ನು ಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:22
25 ತಿಳಿವುಗಳ ಹೋಲಿಕೆ  

ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ.


ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.


ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.


ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.


“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.


ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.


“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು