Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:23 - ಕನ್ನಡ ಸಮಕಾಲಿಕ ಅನುವಾದ

23 ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಚೀಯೋನಿನ ಸಂತತಿಯವರೇ, ನಿಮ್ಮ ದೇವರಾದ ಯೆಹೋವನಲ್ಲಿ ಹರ್ಷಿಸಿರಿ, ಉಲ್ಲಾಸಿಸಿರಿ; ಆತನು ಮುಂಗಾರನ್ನು ತಕ್ಕ ಹಾಗೆ ನಿಮಗೆ ಕೊಡುವನು; ಮುಂಗಾರು ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಚೀಯೋನಿನ ಜನರೇ, ಸಂತೋಷಪಡಿರಿ. ನಿಮ್ಮ ದೇವರಾದ ಯೆಹೋವನಲ್ಲಿ ಸಂತೋಷಿಸಿರಿ. ಆತನು ನಿಮಗೆ ಮಳೆ ಸುರಿಸುವನು. ಹಿಂದಿನಂತೆ ನಿಮಗೆ ಮುಂಗಾರು, ಹಿಂಗಾರು ಮಳೆಗಳನ್ನು ಸುರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:23
42 ತಿಳಿವುಗಳ ಹೋಲಿಕೆ  

ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.


ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.


ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.


ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.


ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.


ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.


ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.


ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!


ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.


ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.


ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.


ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ.


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು