Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:3 - ಕನ್ನಡ ಸಮಕಾಲಿಕ ಅನುವಾದ

3 ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದರ ಮುಂಗಡೆ ಬೆಂಕಿಯು ನುಂಗಿಕೊಂಡು ಬರುತ್ತದೆ, ಹಿಂಗಡೆ ಜ್ವಾಲೆಯು ಧಗಧಗಿಸುತ್ತದೆ; ಅದು ಬರುವದಕ್ಕೆ ಮುಂಚೆ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ದಾಟಿಹೋದ ಮೇಲೆ ಬೆಗ್ಗಾಡಾಗಿದೆ; ಅದಕ್ಕೆ ಯಾವದೂ ತಪ್ಪಿಸಿಕೊಳ್ಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸೈನ್ಯವು ಸುಡುವ ಬೆಂಕಿಯಂತೆ ದೇಶವನ್ನು ನಾಶಮಾಡುವದು. ಏದೆನ್ ತೋಟದಂತೆ ಕಂಗೊಳಿಸುತ್ತಿದ್ದ ದೇಶವು ಸೈನ್ಯವು ಬಂದ ಮೇಲೆ ಬೆಂಗಾಡಿನಂತಿರುವದು. ಅವರಿಂದ ಯಾರೂ ತಪ್ಪಿಸಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:3
21 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.


ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.


ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.


ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.


ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.


ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.


ಲೋಕವನ್ನು ಕಾಡನ್ನಾಗಿ ಮಾಡಿ, ನಗರಗಳನ್ನು ಕೆಡವಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ?” ಎಂದುಕೊಳ್ಳುವರು.


ನಿಮ್ರೀಮ್ ಹೊಳೆಯು ಬತ್ತಿಹೋಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು ಅಲ್ಲಿ ಹಸಿರಾದದ್ದು ಇಲ್ಲ.


“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.


ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.


ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು