Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:32 - ಕನ್ನಡ ಸಮಕಾಲಿಕ ಅನುವಾದ

32 ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:32
32 ತಿಳಿವುಗಳ ಹೋಲಿಕೆ  

ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.


ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.


ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.


‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’


ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.


ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.


ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.


ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.


ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.


ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ


ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.


ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?


ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’


ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.


ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ.


ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.


“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು