ಯೋಯೇಲ 2:5 - ಕನ್ನಡ ಸಮಕಾಲಿಕ ಅನುವಾದ5 ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ. ಅಧ್ಯಾಯವನ್ನು ನೋಡಿ |