Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:9 - ಕನ್ನಡ ಸಮಕಾಲಿಕ ಅನುವಾದ

9 ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತವೆ. ಗೋಡೆಯ ಮೇಲೆ ಓಡುತ್ತವೆ. ಅವು ಮನೆಗಳನ್ನು ಹತ್ತಿ, ಕಳ್ಳನ ಹಾಗೆ ಕಿಟಿಕಿಗಳಿಂದ ಪ್ರವೇಶಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪಟ್ಟಣಗಳ ಮೇಲೆ ಹಾರಾಡುತ್ತವೆ, ಗೋಡೆಗಳ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತಿ, ಕಳ್ಳರಂತೆ ಕಿಟಕಿಗಳಲ್ಲಿ ನುಗ್ಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಲ್ಲಿ ಕಳ್ಳರಂತೆ ನುಗ್ಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಪಟ್ಟಣದ ಕಡೆಗೆ ಓಡಿ ತ್ವರೆಯಾಗಿ ಗೋಡೆ ಹತ್ತುವರು. ಮನೆಯೊಳಗೆ ನುಗ್ಗುವರು; ಕಳ್ಳರಂತೆ ಕಿಟಕಿಯಿಂದ ನುಸುಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:9
5 ತಿಳಿವುಗಳ ಹೋಲಿಕೆ  

ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.


ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು.


ಒಂದು ಇನ್ನೊಂದನ್ನು ನೂಕುವುದಿಲ್ಲ. ಅವುಗಳಲ್ಲಿ ಪ್ರತಿಯೊಂದು ತನ್ನ ತನ್ನ ದಾರಿಯಲ್ಲಿ ಮುನ್ನಡೆಯುತ್ತವೆ. ತಮ್ಮ ಸ್ಥಾನಗಳನ್ನು ಬಿಟ್ಟುಕೊಡದೆ ಯುದ್ಧ ಮಾಡುತ್ತವೆ.


ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು