ಯೋಯೇಲ 3:11 - ಕನ್ನಡ ಸಮಕಾಲಿಕ ಅನುವಾದ11 ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸುತ್ತಮುತ್ತಲಿನ ಜನಾಂಗಗಳೇ, ತ್ವರೆಯಾಗಿ ಕೂಡಿಬನ್ನಿರಿ, ನೀವೆಲ್ಲರೂ ಒಟ್ಟಾಗಿ ಕೂಡಿಬನ್ನಿರಿ. ಯೆಹೋವನೇ, ನಿನ್ನ ಶೂರರನ್ನು ರಣರಂಗಕ್ಕೆ ಇಳಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸುತ್ತಣ ಜನಾಂಗಗಳೇ, ತ್ವರೆಪಡಿರಿ, ನೀವೆಲ್ಲರೂ ಬನ್ನಿರಿ, ಕೂಡಿಕೊಳ್ಳಿರಿ; ಯೆಹೋವನೇ, ನಿನ್ನ ಶೂರರನ್ನು [ರಣರಂಗಕ್ಕೆ] ಇಳಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲ್ಲಾ ಜನಾಂಗದವರೇ, ತ್ವರೆಪಡಿರಿ. ಆ ಸ್ಥಳದಲ್ಲಿ ಒಟ್ಟುಸೇರಿರಿ. ಯೆಹೋವನೇ, ನಿನ್ನ ಬಲಶಾಲಿಯಾದ ಸೈನಿಕರನ್ನು ಬರಮಾಡು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.