Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:14 - ಕನ್ನಡ ಸಮಕಾಲಿಕ ಅನುವಾದ

14 ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾ, ತೀರ್ಪಿನ ತಗ್ಗಿನಲ್ಲಿ ಗುಂಪು ಗುಂಪು! ತೀರ್ಪಿನ ತಗ್ಗಿನಲ್ಲಿ ಯೆಹೋವನ ದಿನವು ಸಮೀಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತೀರ್ಮಾನದ ತಗ್ಗಿನಲ್ಲಿ ಅನೇಕರು ಸೇರಿದ್ದಾರೆ. ಯೆಹೋವನ ವಿಶೇಷ ದಿನವು ತೀರ್ಮಾನದ ತಗ್ಗಿನ ಹತ್ತಿರ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:14
17 ತಿಳಿವುಗಳ ಹೋಲಿಕೆ  

ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.


ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.


ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?


ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.


ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು