Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:16 - ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:16
31 ತಿಳಿವುಗಳ ಹೋಲಿಕೆ  

ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”


“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.


ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”


ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.


ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.


ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.


ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.


ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?


ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.


“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.


ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.


ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.


ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.


ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು