2 ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.
2 ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.
2 ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.
2 ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.
2 ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.
ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.
“ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು.
ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.
ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.
ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’
ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?
ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”
“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.