Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:11 - ಕನ್ನಡ ಸಮಕಾಲಿಕ ಅನುವಾದ

11 ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ತನ್ನ ಸ್ವಾಸ್ಥ್ಯಕ್ಕೆ ಬಂದನು; ಆದರೆ ಸ್ವಂತಜನರು ಆತನನ್ನು ಅಂಗೀಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆತನು ತನ್ನ ಸ್ವಾಸ್ತ್ಯಕ್ಕೆ ಬಂದನು. ಆದರೆ ಆತನ ಸ್ವಂತ ಜನರು ಆತನನ್ನು ಸ್ವೀಕರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೊ ಅಪ್ಲ್ಯಾ ಸ್ವತಾಚ್ಯಾ ದೆಶಾಕ್‍ ಯೆಲೊ. ಖರೆ ತ್ಯೆಚ್ಯಾ ಲೊಕಾನಿಚ್ ತೆಕಾ ಸ್ವಿಕಾರ್ ಕರುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:11
17 ತಿಳಿವುಗಳ ಹೋಲಿಕೆ  

“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.


ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.


ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.


ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.


ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.


ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.


ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.


ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.


ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.


ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು