Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:16 - ಕನ್ನಡ ಸಮಕಾಲಿಕ ಅನುವಾದ

16 ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ವಾಕ್ಯ ಎಂಬಾತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು. ಆತನಿಂದಲೇ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತ್ಯೆಚ್ಯಾ ಮಾಪುಕ್ ಹೊಯ್ನಾ ತವ್ಡ್ಯಾ ಮೊಟ್ಯಾ ಕುರ್ಪೆನ್ ತೊ ಅಮ್ಕಾ ಸಗ್ಳ್ಯಾಕ್ನಿ ಕುರ್ಪೆಚ್ಯಾ ವರ್ತಿ ಕುರ್ಪಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:16
24 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.


ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.


ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.


ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.


ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!


ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”


ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು