Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:18 - ಕನ್ನಡ ಸಮಕಾಲಿಕ ಅನುವಾದ

18 ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರನ್ನು ಯಾರೂ ಎಂದೂ ಕಂಡಿಲ್ಲ. ಆದರೆ ಒಬ್ಬನೇ ಮಗನು (ಯೇಸು) ದೇವರಾಗಿದ್ದಾನೆ ಮತ್ತು ಆತನು ತಂದೆಯ (ದೇವರ) ಎದೆಯಲ್ಲಿದ್ದಾನೆ. ಆತನೇ ತಂದೆಯನ್ನು ತಿಳಿಯಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದೆವಾಕ್ ಕೊನ್ಬಿ ಕದ್ದಿಚ್ ಬಗಟಲ್ಲೆ ನಾ, ಖರೆ ಬಾಬಾನ್ ದೆವಾಚ್ಯಾ ಸರ್ಕೊ ಅನಿ ಅಪ್ನಾಚ್ಯಾ ಜಿವಾತ್ ಜಿವ್ ಹೊವ್ನ್ ಹೊತ್ತ್ಯಾ ಅಪ್ನಾಚ್ಯಾ ಎಕ್ಲ್ಯಾಚ್ ಲೆಕಾಕ್ ಎವ್ಡೆಚ್ ಅಪ್ನಾಕ್ ದಾಕ್ವುನ್ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:18
41 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.


ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.


“ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ.


ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”


ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.


ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.


ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.


ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.


ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.


ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು.


ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.


ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.


ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು