Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:26 - ಕನ್ನಡ ಸಮಕಾಲಿಕ ಅನುವಾದ

26 ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪ್ರತ್ಯುತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ನಿಮಗೆ ತಿಳಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅದಕ್ಕೆ ಯೋಹಾನನು - ನಾನು ನೀರಿನಿಂದ ಸ್ನಾನಮಾಡಿಸುವವನು; ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೋಹಾನನು, “ನಾನು ಜನರಿಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನಿಮಗೆ ಗೊತ್ತಿಲ್ಲದ ಒಬ್ಬನು ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜುವಾಂವಾನ್ “ಮಿಯಾ ಪಾನಿಯಾನ್ ಬಾಲ್ತಿಮ್ ದಿತಾ, ಖರೆ ತುಮ್ಚ್ಯಾ ಮದ್ದಿ ಎಕ್ ಮಾನುಸ್ ಹಾಯ್ ತೆಕಾ ತುಮಿ ಒಳ್ಕಿನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:26
14 ತಿಳಿವುಗಳ ಹೋಲಿಕೆ  

ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.


ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು.


“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.


ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು