Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:32 - ಕನ್ನಡ ಸಮಕಾಲಿಕ ಅನುವಾದ

32 ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದುಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನಂದರೆ - ದೇವರಾತ್ಮವು ಪಾರಿವಾಳದಂತೆ ಆಕಾಶದಿಂದ ಇಳಿಯುವದನ್ನು ನೋಡಿದೆನು. ಅದು ಆತನ ಮೇಲೆ ನೆಲೆಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32-33 ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನೆಂದರೆ, “ಆತನು ಯಾರೆಂದು ನನಗೂ ಗೊತ್ತಿರಲಿಲ್ಲ. ಆದರೆ ಜನರಿಗೆ ದೀಕ್ಷಾಸ್ನಾನ ಕೊಡಲು ನನ್ನನ್ನು ಕಳುಹಿಸಿದಾತನು ನನಗೆ, ‘ಪವಿತ್ರಾತ್ಮನು ಇಳಿದುಬಂದು ಒಬ್ಬ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವೆ. ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವವನು ಆ ವ್ಯಕ್ತಿಯೇ’ ಎಂದು ಹೇಳಿದ್ದನು. ಇದು ನೆರವೇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಪವಿತ್ರಾತ್ಮನು ಪರಲೋಕದಿಂದ ಪಾರಿವಾಳದ ರೂಪದಲ್ಲಿ ಇಳಿದುಬಂದು ಆತನ (ಯೇಸುವಿನ) ಮೇಲೆ ನೆಲಸುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅನಿ ಜುವಾಂವಾನ್ ಅಪ್ನಾಚಿ ಸಾಕ್ಷಿ ದಿಲ್ಯಾನ್; ದೆವಾಚೊ ಆತ್ಮೊ ಪಾರಿವಾಳಾಚ್ಯಾ ರುಪಾರ್ ಸರ್‍ಗಾ ವೈನಾ ಉತರ್‍ತಲೆ, ಅನಿ ತೆಚೆ ವರ್ತಿ ಬಸಲ್ಲೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:32
7 ತಿಳಿವುಗಳ ಹೋಲಿಕೆ  

ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.


ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.


ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು.


ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,


ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು