Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:37 - ಕನ್ನಡ ಸಮಕಾಲಿಕ ಅನುವಾದ

37 ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಇಬ್ಬರು ಶಿಷ್ಯರು ಅದನ್ನು ಕೇಳಿ ಯೇಸುವಿನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೋಹಾನನ ಈ ಮಾತನ್ನು ಕೇಳಿದ ಆ ಇಬ್ಬರು ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಹ್ಯಾ ತ್ಯೆಚ್ಯಾ ಗೊಸ್ಟಿಯಾ ಆಯ್ಕುನ್ ತಿ ದೊಗ್‍ಜಾನಾ ಶಿಸಾ ಜೆಜುಚಿ ಫಾಟ್ ಧರುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:37
9 ತಿಳಿವುಗಳ ಹೋಲಿಕೆ  

ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.


ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು