Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:39 - ಕನ್ನಡ ಸಮಕಾಲಿಕ ಅನುವಾದ

39 ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಅವರಿಗೆ, “ನೀವೇ ಬಂದು ನೋಡಿರಿ” ಎಂದು ಹೇಳಲು, ಅವರು ಹೋಗಿ ಆತನು ವಾಸಿಸುತ್ತಿದ್ದ ಸ್ಥಳವನ್ನು ನೋಡಿ ಆ ದಿನ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಂಜೆ ನಾಲ್ಕು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸು ಉತ್ತರವಾಗಿ, “ಬಂದು ನೋಡಿ” ಎನ್ನಲು ಅವರು ಹೋಗಿ ಯೇಸು ಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆತನು - ಬಂದು ನೋಡಿರಿ ಅಂದಾಗ ಅವರು ಬಂದು ಆತನು ಇಳುಕೊಂಡಿದ್ದ ಸ್ಥಳವನ್ನು ನೋಡಿ ಆ ದಿವಸ ಆತನ ಸಂಗಡ ಇದ್ದರು. ಆಗ ಹೆಚ್ಚುಕಡಿಮೆ ಸಾಯಂಕಾಲ ನಾಲ್ಕು ಘಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು, “ನನ್ನೊಂದಿಗೆ ಬನ್ನಿ, ಆಗ ನೀವೇ ನೋಡುವಿರಿ” ಎಂದು ಹೇಳಿದನು. ಆದ್ದರಿಂದ ಆ ಇಬ್ಬರು ಹೋಗಿ ಯೇಸು ಇಳಿದುಕೊಂಡಿದ್ದ ಸ್ಥಳವನ್ನು ನೋಡಿದರು. ಆ ದಿನ ಅವರು ಅಲ್ಲಿಯೇ ಆತನೊಂದಿಗೆ ಇದ್ದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತನ್ನಾ ಜೆಜುನ್, “ಯೆವಾ, ಅನಿ ತುಮಿ ಬಗ್ತ್ಯಾಸಿ”, ಮನುನ್ ಜವಾಬ್ ದಿಲ್ಯಾನ್. ತನ್ನಾ ಸಾಂಚೆಕ್ಡೆ ಚಾರ್ ಘಂಟೆ ಹೊಲ್ಲೆ. ಅಶೆ ತೆನಿ ತ್ಯೆಚ್ಯಾ ಫಾಟ್ನಾ ಗೆಲ್ಯಾನಿ, ಅನಿ ತೊ ಖೈ ರ್‍ಹಾತಾ ಮನುನ್ ಬಗಟ್ಲ್ಯಾನಿ, ಅನಿ ತ್ಯಾ ದಿಸಿ ದಿಸ್ ಬುಡಿ ಪತರ್ ತ್ಯೆಚ್ಯಾ ವಾಂಗ್ಡಾ ರ್‍ಹಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:39
11 ತಿಳಿವುಗಳ ಹೋಲಿಕೆ  

ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.


“ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.


ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು