ಯೋಹಾನ 1:42 - ಕನ್ನಡ ಸಮಕಾಲಿಕ ಅನುವಾದ42 ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. ) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ). ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಮಾನಾ ತೆನಿ ಸಿಮಾವಾಕ್ ಜೆಜುಕ್ಡೆ ಬಲ್ವುನ್ ಘೆವ್ನ್ ಯೆಲೊ. ತನ್ನಾ ಜೆಜುನ್ ತೆಕಾ ಬಗುನ್, “ತಿಯಾ ಜುವಾಂವಾಚೊ ಲೆಕ್ ಸಿಮಾವ್, ಖರೆ ತುಕಾ ಹ್ಯಾನ್ ಫಿಡೆ ಕೆಫಾಸ್ ಮನ್ತಾತ್”. ಕೆಫಾಸ್ ಮಟ್ಲ್ಯಾರ್, ಪೆದ್ರು ನಾಹೊಲ್ಯಾರ್, ಗುಂಡೊ. ಅಧ್ಯಾಯವನ್ನು ನೋಡಿ |