Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:46 - ಕನ್ನಡ ಸಮಕಾಲಿಕ ಅನುವಾದ

46 “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ನಾಥಾನಾಯೆಲಾನ್, “ನಜರೆತಾತ್ನಾ ಕಾಯ್ ತರ್ ಬರೆ ಮನ್ತಲೆ ಯೆವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಫಿಲಿಪಾನ್ ತೆಕಾ “ಯೆ ಅನಿ ಬಗ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:46
14 ತಿಳಿವುಗಳ ಹೋಲಿಕೆ  

ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.


“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.


“ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?


ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.


ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.


ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.


ಅದಕ್ಕೆ ಫಿಲಿಪ್ಪನು, “ಸ್ವಾಮೀ, ತಂದೆಯನ್ನು ನಮಗೆ ತೋರಿಸಿರಿ, ನಮಗೆ ಅಷ್ಟೇ ಸಾಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು