Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:50 - ಕನ್ನಡ ಸಮಕಾಲಿಕ ಅನುವಾದ

50 ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಜೆಜುನ್ ತೆಕಾ, “ಅಂಜುರಾಚ್ಯಾ ಝಾಡಾ ಬುಡಿ ಹೊತ್ತ್ಯಾ ತನ್ನಾ ಮಿಯಾ ತುಕಾ ಬಗಟ್ಲೊ ಮನುನ್ ಸಾಂಗಟಲ್ಲ್ಯಾಸಾಟಿ ತಿಯಾ ಮಾಕಾ ವಿಶ್ವಾಸ್ ಕರ್‍ತೆ ಕಾಯ್? ಹೆಚ್ಯಾನ್ಕಿಬಿ ಮೊಟಿ ಕಾಮಾ ತಿಯಾ ಬಗ್ತೆಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:50
9 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.


ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.


ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.


ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು