Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:11 - ಕನ್ನಡ ಸಮಕಾಲಿಕ ಅನುವಾದ

11 “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ಬಕ್ರ್ಯಾಂಚ್ಯಾ ಸಾಟ್ನಿ ಜಿವ್ ದಿವ್ಕ್ ತಯಾರ್ ಅಸಲ್ಲೊ ಬರೊ ಕುರ್‍ಬುರ್ ಮಿಯಾಚ್”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:11
25 ತಿಳಿವುಗಳ ಹೋಲಿಕೆ  

ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.


ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?


ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು